ಯೋಧರ ಹತ್ಯೆ: ಉಪ್ಪಿನಂಗಡಿ ವಿದ್ಯಾರ್ಥಿಗಳಿಂದ ಖಂಡನೆ, ಶ್ರದ್ದಾಂಜಲಿ ಅರ್ಪಣೆ
ಉಪ್ಪಿನಂಗಡಿ, ಫೆ. 16: ಕಾಶ್ಮೀರದಲ್ಲಿ ಯೋಧರ ಹತ್ಯೆಯನ್ನು ಖಂಡಿಸಿ ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಪುತ್ತೂರು ತಾಲೂಕು ಇದರ ವತಿಯಿಂದ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಖಂಡನಾ ಸಭೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಮದ್ ಉಪ್ಪಿನಂಗಡಿ ಒಕ್ಕೂಟದ ಪರವಾಗಿ ಸಂತಾಪ ವ್ಯಕ್ತಪಡಿಸಿದರು.
ಇದೇ ವೇಳೆ ಹುತಾತ್ಮರಾದ ಯೋಧರಿಗೆ ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. ಈ ವೇಳೆ ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಗರೀಬ್ ನವಾಝ್ ಬುಡೋಳಿ ಮತ್ತು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು. ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ನೌಫಲ್ ಕುಪ್ಪೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story