ಫೆ. 21: ಯಶವಂತಪುರ-ಮಂಗಳೂರು ಎಕ್ಸ್ಪ್ರೆಸ್ಗೆ ಚಾಲನೆ
ಮಂಗಳೂರು, ಫೆ.20: ವಾರದಲ್ಲಿ ಮೂರು ಬಾರಿ ಸಂಚರಿಸುವ ಯಶವಂತಪುರ-ಮಂಗಳೂರು ಎಕ್ಸ್ಪ್ರೆಸ್ ರೈಲಿಗೆ ಫೆ.21ರಂದು ಬೆಳಗ್ಗೆ 11 ಗಂಟೆಗೆ ನಗರದ ಕೇಂದ್ರ ರೈಲು ನಿಲ್ದಾಣದಲ್ಲಿ ಲೋಕಸಭಾ ಸದಸ್ಯ ನಳಿನ್ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಕೆ., ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಐವನ್ ಡಿಸೋಜ, ಆಯನೂರು ಮಂಜುನಾಥ, ಎಸ್.ಎಲ್.ಭೋಜೇಗೌಡ, ಕೆ.ಪ್ರತಾಪಚಂದ್ರ ಶೆಟ್ಟಿ ಆಗಮಿಸಲಿದ್ದಾರೆ.
Next Story