ನಿವೃತ್ತ ಮುಖ್ಯ ಶಿಕ್ಷಕಿ ಅಂಜಲಿ ಡಿಕುನ್ಹ ನಿಧನ
ಬಂಟ್ವಾಳ, ಫೆ. 22: ಕಾವಳಮೂಡೂರು ಗ್ರಾಮದ ಎನ್.ಸಿ. ರೋಡ್ ನಿವಾಸಿ, ದಿ. ಬೇಬಿ ಅವರ ಪತ್ನಿ, ನಿವೃತ್ತ ಮುಖ್ಯ ಶಿಕ್ಷಕಿ ಅಂಜಲಿ ಡಿಕುನ್ಹ (84) ಅವರು ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ಮೃತರು ಇಬ್ಬರು ಪುತ್ರರನ್ನು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಾವಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಅವರು, ಅಂಜಲಿ ಟೀಚರ್ ಎಂದು ಖ್ಯಾತಿ ಹೊಂದಿದ್ದು, ಶಾಲೆಯ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸಿದ್ದರು.
ಅವರ ನಿಧನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಪಂ ಸದಸ್ಯ ಪದ್ಮಶೇಖರ್ ಜೈನ್ ಅವರು ಮೃತರ ಅಂತಿಮ ದರ್ಶನ ಪಡೆದು, ಸಂತಾಪ ಸೂಚಿಸಿದರು.
Next Story