ಕೋಟ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಕೋಟ, ಮಾ. 8: ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಕೋಟ ಪೊಲೀಸ್ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸವನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಶುಕ್ರವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್, ಬ್ರಹ್ಮಾವರ ವೃತ್ತ ನಿರೀಕ್ಷಕ ಪೂವಯ್ಯ, ಬ್ರಹ್ಮಾವರ ಠಾಣಾಧಿಕಾರಿ ರಾಘವೇಂದ್ರ ಸಿ., ಇಂಜಿನಿಯರ್ ಸಂತೋಷ್ ಕುಮಾರ್ ರೈ, ಗುತ್ತಿಗೆದಾರ ಪ್ರಮೋದ್ ಕುಮಾರ್ ಶೆಟ್ಟಿ, ಸಾಮಾಜಿಕ ಹೋರಾಟಗಾರ ಗಿರೀಶ್ ನಾಯಕ್ ಮೊದಲಾದ ವರು ಉಪಸ್ಥಿತರಿದ್ದರು.
Next Story