ಯುವಕನಿಂದ ಬಾಲಕಿ ಮೇಲೆ ಅತ್ಯಾಚಾರ
ಕಾರ್ಕಳ, ಮಾ.11: ಯುವಕನೋರ್ವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಈದು ಗ್ರಾಮದ ಸುರೇಶ್(25) ಎಂದು ಗುರುತಿಸ ಲಾಗಿದೆ.
ಈತ ನಾಲ್ಕು ತಿಂಗಳ ಹಿಂದೆ 9ನೆ ತರಗತಿಯ 14 ವರ್ಷ ವಯಸ್ಸಿನ ಬಾಲಕಿಯ ಮೇಲೆ ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದನು. ಇದೀಗ ಆಕೆ ಗರ್ಭಿಣಿ ಯಾಗಿದ್ದು, ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ.
Next Story