ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಸೆರೆ
ಮಂಗಳೂರು, ಮಾ. 21: ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ ಕಾವೂರು ಜಂಕ್ಷನ್ ಬಳಿಯ ಕೂಳೂರು ರಸ್ತೆಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಶಾಂತಿನಗರದ ಸುಹೇಬ್ (20) ಎಂಬಾತನನ್ನು ಬುಧವಾರ ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು 110 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನನ್ನು ವಶಪಡಿಸಲಾಗಿದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 27,000 ರೂ. ಆಗಿದೆ ಎಂದು ಅಂದಾಜಿಸಲಾಗಿದೆ.
ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಮತ್ತು ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Next Story