ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತ್ಯು
ಮಲ್ಪೆ, ಎ.21: ಮಲ್ಪೆಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟಿ ನಿಂದ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.20ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಯಾಧವ ಬೈರಾ ಮೋಗೇರ(31) ಎಂದು ಗುರುತಿಸಲಾಗಿದೆ. ಇವರು ಇತರ ಮೀನುಗಾರರೊಂದಿಗೆ ಶಿವಸಂಗಮ ಎಂಬ ಟ್ರೋಲ್ ಬೋಟಿ ನಲ್ಲಿ ಮಲ್ಪೆಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು, ಸುಮಾರು 7 ಮಾರು ಆಳ ಸಮುದ್ರದಲ್ಲಿ ಬೋಟಿನಲ್ಲಿ ಕಲಾಸಿ ಕೆಲಸ ಮಾಡಿಕೊಂಡಿದ್ದ ಯಾಧವ ಮೀನುಗಾರಿಕೆಗೆ ಬಲೆಯನ್ನು ತಯಾರು ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story