ಅಕ್ರಮ ಮರಳು ಸಾಗಾಟ: ಲಾರಿ ವಶ
ಪಡುಬಿದ್ರಿ, ಮೇ 18: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಪಡುಬಿದ್ರೆ ಪೊಲೀಸರು ಶುಕ್ರವಾರ ಮಧ್ಯಾಹ್ನ ವೇಳೆ ಹೆಜಮಾಡಿ ಗ್ರಾಮದ ಕ್ಪೋಸ್ಟ್ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ಲಾರಿಯಲ್ಲಿ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದು, ಈ ವೇಳೆ ಪೊಲೀಸರನ್ನು ಕಂಡ ಚಾಲಕ ಸಹಿತ ಇಬ್ಬರು ಲಾರಿಯನ್ನು ರಸ್ತೆ ಬದಿ ನಿಲ್ಲಿಸಿ ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಪೊಲೀಸರು ಲಾರಿ ಹಾಗೂ ಅದರಲ್ಲಿದ್ದ 15 ಸಾವಿರ ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story