ಮಹಿಳೆ ಆತ್ಮಹತ್ಯೆ ಪ್ರಕರಣ: ಪತಿಯ ವಿರುದ್ಧ ದೂರು
ಬಂಟ್ವಾಳ : ಖಾಸಗಿ ಆಸ್ಪತ್ರೆಯ ನರ್ಸ್ ಸಜೀಪಮುನ್ನೂರು ಗ್ರಾಮದ ಪೆರುವ ಎಂಬಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಆಕೆಯ ಪತಿ ಪ್ರೇರಣೆ ಎಂದು ಮಂಜುಳ ಮನೆಯವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕೆಯ ಪತಿ ಮಹಾಬಲ (48) ಎಂಬಾತನನ್ನು ಬಂಧಿಸಿರುವುದಾಗಿ ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.
ಪೆರುವ ಸಮೀಪದ ಕೊಳಕೆ ನಿವಾಸಿ ಮಹಾಬಲ ಎಂಬವರ ಪತ್ನಿ ಮಂಜುಳಾ (38) ಶವ ನೇಣುಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿತ್ತು. ಮಂಜುಳಾ ಅವರು ಬಿ.ಸಿ.ರೋಡಿನ ಖಾಸಗಿ ನರ್ಸಿಂಗ್ ಹೋಂನಲ್ಲಿ ನರ್ಸ್ ಆಗಿ ದುಡಿಯುತ್ತಿದ್ದರು. ಶುಕ್ರವಾರ ಸಂಜೆ ಮನೆಯಲ್ಲಿ ಆತ್ಮಹತ್ಯೆ ಎಸಗಿದ್ದಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಾವಿನ ಕುರಿತು ಆಕೆಯ ಮನೆಯವರು ನೀಡಿದ ದೂರಿನಂತೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಆಕೆಯ ಪತಿಯನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Next Story