ಮೇ 24ರಂದು ಮಾವು ಮಾರಾಟ ಮೇಳ
ಮಂಗಳೂರು, ಮೇ 21: ಮಾವು ಅಭಿವೃದ್ಧಿ ಹಾಗೂ ಮಾರಾಟ ಮಂಡಳಿ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24ರಂದು ನಗರದ ಕದ್ರಿ ಉದ್ಯಾನವನದಲ್ಲಿ ಮಾವು ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಮಾವು ಮಾರಾಟದ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿ ಭಾಗವಹಿಸಿದ ರೈತರಿಗೆ ಪ್ರೋತ್ಸಾಹಿಲು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story