ವಿವಿಧ ಬ್ಯಾಂಕ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ
ಉಡುಪಿ, ಮೇ 22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದಾದ್ಯಂತ ಎಸ್ಬಿಐ ಬ್ಯಾಂಕ್ನ ಎಂಟು ಸಾವಿರ ಗುಮಾಸ್ತರ ಹುದ್ದೆಗಳಿಗೆ ಮತ್ತು ಮುಂಬರುವ ವಿವಿಧ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಆಯೋಜಿಸಲಾಗಿದೆ.
ಈ ಸಂಬಂಧ ತರಬೇತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ನೀಡಲಾಗುತ್ತದೆ. ಆಸಕ್ತರು ಮೇ 28ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ ಆವರಣ ದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ:0821-2515944ನ್ನು ಸಂಪರ್ಕಿ ಸುವಂತೆ ಕರಾಮುವಿ ಉಡುಪಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.