ಮರಕ್ಕೆ ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
ಶಿವಮೊಗ್ಗ: ಮರಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಘಟನೆ ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯ ಗೋವಿನಕೋವಿ ಬಳಿ ನಡೆದಿದೆ.
ಮೃತರನ್ನು ಹಾವೇರಿ ನಿವಾಸಿ ಸೈಯದ್ (26) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story