ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು
ಬಂಟ್ವಾಳ : ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬರೀಮಾರು ಎಂಬಲ್ಲಿ ಶನಿವಾರ ಸಂಭವಿಸಿದೆ.
ಮೃತರನ್ನು ಮನೀಷ್ (14) ಮತ್ತು ಅಜೀತ (40) ಎಂದು ಗುರುತಿಸಲಾಗಿದ್ದು, ರಕ್ಷಿತ್ (13) ಎಂಬಾತನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬರೀಮಾರು ಗ್ರಾಮದ ಕಾಗೆಕಾನ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ನೀರಾಟವಾಡುತ್ತಿದ್ದಾಗ ಈ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Next Story