ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಉಡುಪಿ, ಮೇ 26: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ರಸ್ತೆ ವಿಭಾಜಕದ ಬಳಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಎಲ್ವಿಟಿ ದೇವಸ್ಥಾನದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 26ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಉಪ್ಪೂರು ತೆಂಕಬೆಟ್ಟುವಿನ ವಿಠಲ ಪೂಜಾರಿ(49) ಎಂದು ಗುರು ತಿಸಲಾಗಿದೆ. ಇವರು ಎಲ್ವಿಟಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸು ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಚಾಲಕ ಕಾರನ್ನು ನಿಲ್ಲಿಸದೇ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ವಿಠಲ ಪೂಜಾರಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story