ಕಾಸರಗೋಡು : ಕಾರು ಢಿಕ್ಕಿ - ಬೈಕ್ ಸವಾರ ಮೃತ್ಯು
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಕುಂಡಂಗುಳಿಯ ಮರುತ್ತಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ಕುಂಡಂಗುಳಿಯ ಚರಣ್ ರಾಜ್ ( 22) ಎಂದು ಗುರುತಿಸಲಾಗಿದೆ.
ಮರುತ್ತಡ್ಕ ಗ್ಯಾರೇಜ್ ನಲ್ಲಿ ಇಲೆಕ್ಟ್ರಾನಿಕ್ಸ್ ಕೆಲಸ ನಿರ್ವಹಿಸುತ್ತಿದ್ದ ಚರಣ್ ರಾಜ್ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡಿದ್ದ ಚರಣ್ ರಾಜ್ ನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story