ಪುದು ಗ್ರಾ.ಪಂ. ಸದಸ್ಯ ರಿಯಾಝ್ ಕೊಲೆಯತ್ನ ಪ್ರಕರಣ: ಆರೋಪಿಗಳು ಬೆಂಗಳೂರಿನಲ್ಲಿ ವಶಕ್ಕೆ ?
ಮುಹಮ್ಮದ್ ರಿಯಾಝ್
ಉಡುಪಿ, ಜೂ. 9: ಬಂಟ್ವಾಳ ತಾಲೂಕಿನ ಪುದು ಗ್ರಾ.ಪಂ. ಸದಸ್ಯ ಹಾಗೂ ಮೀನಿನ ವ್ಯಾಪಾರಿ ಕೆ. ಮುಹಮ್ಮದ್ ರಿಯಾಝ್ (34) ಕೊಲೆಯತ್ನ ಪ್ರಕರಣದ ಆರೋಪಿಗಳು ಬೆಂಗಳೂರಿನಲ್ಲಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮಲ್ಪೆ ಬಂದರಿಗೆ ಮೀನಿನ ವ್ಯಾಪಾರಕ್ಕೆ ಜೂ. 7ರಂದು ಇತರ ಮೂವರೊಂದಿಗೆ ಬಂದಿದ್ದ ರಿಯಾಝ್ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದರು. ನಂತರ ಆರೋಪಿಗಳು ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗಿದ್ದರೆನ್ನಲಾಗಿದೆ.
ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂರು ತಂಡಗಳನ್ನು ರಚಿಸಿ, ಒಂದು ತಂಡವನ್ನು ಬೆಂಗಳೂರಿಗೆ ಕಳುಹಿಸಿತ್ತು. ಆರೋಪಿಗಳು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
Next Story