ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು
ಕೋಟ, ಜೂ.9: ಚಿತ್ರಪಾಡಿ ಗ್ರಾಮದ ವಿಘ್ನೇಶ ಡ್ರೈವಿಂಗ್ ಸ್ಕೂಲ್ ಎದುರು ಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.9ರಂದು ಬೆಳಗ್ಗೆ 10.15ರ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಬಗ್ಗೆ ವರದಿ ಯಾಗಿದೆ.
ಮೃತರನ್ನು ರಾಮ ಪೂಜಾರಿ ಎಂದು ಗುರುತಿಸಲಾಗಿದೆ. ಸಾಲಿಗ್ರಾಮ ಕಡೆಯಿಂದ ಕೋಟ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿ ರಾಮ ಪೂಜಾರಿ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸೈಕಲ್ಗೆ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಾಮ ಪೂಜಾರಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story