ಪದುವಾ ಕಾಲೇಜಿನಲ್ಲಿ ಉದ್ಯೋಗ ಮೇಳ
ಮಂಗಳೂರು, ಜೂ.12: ದ.ಕ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಪದುವಾ ಕಾಲೇಜಿನಲ್ಲಿ ಉದ್ಯೋಗ ಮೇಳವು ಜರುಗಿತು.
ಸುಮಾರು 26 ಕಂಪೆನಿಗಳು ಭಾಗವಹಿಸಿದ್ದ ಈ ಮೇಳದಲ್ಲಿ ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಐನೂರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು.
Next Story