ಮಾದಕ ವಸ್ತು ಮಾರಾಟ: ಗೂಂಡಾ ಕಾಯ್ದೆಯಡಿ ಆರೋಪಿ ಸೆರೆ
ಮಂಗಳೂರು, ಜೂ.15: ಗಾಂಜಾ ಸೇರಿದಂತೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಂಟ್ವಾಳ ತಾಲೂಕು ನರಿಂಗಾನ ಗ್ರಾಮದ ತೌಡುಗೋಳಿ ಅಬ್ದುಲ್ ಅಝೀಝ್ (42) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
ಗಾಂಜಾ ಸೇರಿದಂತೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಈತನ ವಿರುದ್ಧ ಕೊಣಾಜೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿವೆ.
ಈ ಸಂಬಂಧ ಆರೋಪಿಯು ಹಲವು ಬಾರಿ ಜೈಲ್ಗೆ ಹೋಗಿ ಬಂದಿದ್ದ. ಆದರೂ ಹಳೇ ಚಾಳಿಯನ್ನು ಮುಂದುವರಿಸಿದ್ದ. ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದ ಮೇರೆಗೆ ಕೊಣಾಜೆ ಪೊಲೀಸರು ಆತನ ವಿರುದ್ಧ ಗೂಂಡಾ ಗೂಂಡಾ ಕಾಯ್ದೆಗೆ ಪೂರಕವಾದ ದಾಖಲೆಗಳನ್ನು ಸಿದ್ಧಪಡಿಸಿ ಆಯುಕ್ತರಿಗೆ ನೀಡಿದ್ದರು. ಅವುಗಳನ್ನು ಪರಿಶೀಲಿಸಿದ ಆಯುಕ್ತರು ಆರೋಪಿ ವಿರುದ್ಧ ಗೂಂಡಾ ಕಾಯ್ದೆ ಹೇರಿದ್ದಾರೆ.
ಆರೋಪಿಯನ್ನು ಬೆಂಗಳೂರು ಪರಪ್ಪನ ಅಗ್ರಹಾರ ಜೈಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story