ತುಂಬೆ: ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೇರಿದ ಟ್ಯಾಂಕರ್
ಬಂಟ್ವಾಳ : ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಒಂದು ಕೆಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ವಿಭಜಕಕ್ಕೇರಿದ ಘಟನೆ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಇದೀಗ ನಡೆದಿದೆ.
ಮಂಗಳೂರಿನಿಂದ ಬಿ.ಸಿರೋಡ್ ಕಡೆಗೆ ತರಳುತ್ತಿದ್ದ ಬಸ್ ತುಂಬೆ ಬಳಿ ಬ್ರೇಕ್ ಹಾಕಿ ಬಲ ಬದಿಗೆ ಸಂಚರಿಸಿದೆ. ಪರಿಣಾಮ ಬಸ್ಸಿನ ಹಿಂದಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ನಿಯಂತ್ರಣ ತಪ್ಪಿ ಬಸ್ ಗೆ ಢಿಕ್ಕಿಯಾಗಿ ಬಳಿಕ ರಸ್ತೆಯ ವಿಭಜಕಕ್ಕೆ ಹತ್ತಿ ಈ ಘಟನೆ ನಡೆದಿದೆ.
ಗ್ಯಾಸ್ ಟ್ಯಾಂಕರ್ ಚಾಲಕನ ಸಮಯ ಪ್ರಜ್ಞೆಯಿಂದ ವಾಹನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.