ಕುಮಟಾ: ಬೈಕ್-ಟ್ರಕ್ ನಡುವೆ ಅಪಘಾತ; ಮಹಿಳೆ ಮೃತ್ಯು
ಕುಮಟಾ, ಜೂ.18: ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ 66ರ ಮೂರೂರು ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮೂಲತಃ ಚಿಕ್ಕೋಡಿ ನಿವಾಸಿ ಸ್ವಾತಿ ಕೆಮಾರಂ ದೇಸಾಯಿ ಎಂದು ಗುರುತಿಸಲಾಗಿದೆ. ಇವರು ಪತಿಯೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಅತೀವೇಗದಿಂದ ಬಂದ ಟ್ರಕ್ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ಸ್ವಾತಿಯವರ ತಲೆಯ ಮೇಲೆಯೇ ಟ್ರಕ್ ಹರಿದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಸ್ವಾತಿಯವರ ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Next Story