ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.19: ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪೆರ್ಮಾನ್ನೂರು ಗ್ರಾಮದ ಸೇವಂತಿಗುಡ್ಡೆ, ಹರೇಕಳ ಗ್ರಾಮದ ನ್ಯೂಪಡ್ಪು, ಕಲ್ಲಮುಂಡ್ಕೂರು ಗ್ರಾಮದ ನಿಡ್ಡೋಡಿ ಸತ್ಯನಾರಾಯಣ, ಬೋಳಿಯಾರು ಗ್ರಾಮದ ರಂತಡ್ಕ, ಕೊಳಂಬೆ ಗ್ರಾಮದ ಅದ್ಯಪಾಡಿ-1, ಇಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಆನ್ಲೈನ್ (www.anganawadirecruit.kar.nic.in ) ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 15ರಂದು ಸಂಜೆ 5:30ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.
Next Story