ಸಾಲಿಗ್ರಾಮ ಪ.ಪಂ ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಜೂ.20: ಸಾಲಿಗ್ರಾಮ ಪಟ್ಟಣ ಪಂಚಾಯತ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಜನರಿಗೆ, ಇತರೆ ಬಡ ವರ್ಗದವರಿಗೆ ಹಾಗೂ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಎಸ್ಎಫ್ಸಿ ನಿಧಿ ಮತ್ತು ಪಟ್ಟಣ ಪಂಚಾಯತ್ ನಿಧಿ ಯಿಂದ ಅನುದಾನ ಕಾಯ್ದಿರಿಸಿದ್ದು. ಅರ್ಹ ಪಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪಂಗಡದವರಿಗೆ ವಿದ್ಯಾರ್ಥಿ ವೇತನ (ಎಸೆಸೆಲ್ಸಿ ನಂತರದ ವಿದ್ಯಾರ್ಥಿಗಳಿಗೆ), ಅಡುಗೆ ಅನಿಲ ಸಂಪರ್ಕ, ಶೌಚಾಲಯ, ವೈದ್ಯಕೀಯ ಚಿಕಿತ್ಸೆ, ಸ್ವಯಂಉದ್ಯೋಗಕ್ಕಾಗಿ ಸಹಾಯಧನಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇತರೆ ಬಡ ವರ್ಗದವರಿಗೆ ಶೌಚಾಲಯ, ಅನಿಲ ಸಂಪರ್ಕಕ್ಕೆ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ವಿಕಲಚೇತನರಿಗೆ ವಿದ್ಯಾರ್ಥಿ ವೇತನ, ಸ್ವಯಂಉದ್ಯೋಗ, ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧಕ್ಕೆ ಅರ್ಜಿ ಸಲ್ಲಿಸಬಹುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story