ಏರ್ಪೋರ್ಟ್ನಲ್ಲಿ ಅಕ್ರಮ ಚಿನ್ನ ಸಾಗಾಟ: ಪ್ರಯಾಣಿಕ ಸೆರೆ
ಮಂಗಳೂರು, ಜೂ.22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಪ್ರಯಾಣಿಕನನ್ನು ಬಂಧಿಸಿ, ಆತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.
ಪ್ರಯಾಣಿಕನು ಪೇಸ್ಟ್ರೂಪದಲ್ಲಿ 608 ಗ್ರಾಂನ 24 ಕ್ಯಾರೆಟ್ ಶುದ್ಧ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸಲು ಯತ್ನಿಸಿದ್ದಾನೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 20.67 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಸೊತ್ತಿನ ಸಹಿತ ಆರೋಪಿಯನ್ನು ವಶಕ್ಕೆ ಮಂಗಳೂರು ವಿಮಾನ ನಿಲ್ದಣದ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story