ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ
ಉಡುಪಿ, ಜೂ.25: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಒಕ್ಕಲಿಗ (ಗೌಡ)ರ ಸೇವಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಜೂ.27ರಂದು ಬೆಳಗ್ಗೆ 10:30ಕ್ಕೆ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story