ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಪ್ರಸ್ತಾವನೆಗಳಿಗೆ ಆಹ್ವಾನ
ಉಡುಪಿ, ಜೂ.26: ಮೈಸೂರು ವಿಭಾಗದಲ್ಲಿ ಆಟಿಸಂ, ಸೆರೆಬ್ರಲ್ ಪಾಲ್ಸಿ, ಬುದ್ಧಿಮಾಂದ್ಯತೆ ಮತ್ತು ಬಹುವಿಧ ಅಂಗವೈಕಲ್ಯತೆ ಹೊಂದಿರುವ ಮಕ್ಕಳಿಗಾಗಿ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಇಚ್ಚೆಯುಳ್ಳ ವಿಕಲ ಚೇತನರ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಇಚ್ಚೆಯುಳ್ಳ ಸ್ವಯಂ ಸೇವಾ ಸಂಸ್ಥೆಯವರು ಜು.8ರ ಒಳಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿಯವರ ಕಛೇರಿ, ರಜತಾದ್ರಿ, ಮಣಿಪಾಲ ಉಡುಪಿ ಇಲ್ಲಿಗೆ ಪ್ರಸ್ತಾವನೆಯನ್ನು ದ್ವಿಪ್ರತಿ ಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820- 2574810/2574811ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story