ಕುಲಶೇಖರ: ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯಿಂದ ಪ್ರತಿಭಾ ಪುರಸ್ಕಾರ
ಮಂಗಳೂರು, ಜೂ.30: ಕುಲಶೇಖರದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಳೆದ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.85ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರದೊಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಊರಿನ ಗಣ್ಯರು ಉಪಸ್ಥಿತರಿದ್ದರು.
Next Story