ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾದ ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ -ಚಿಕ್ಕಮಗಳೂರು ರಸ್ತೆಗಳ ಅಭಿವೃದ್ಧಿಗೆ ಮನವಿ
ಹೊಸದಿಲ್ಲಿ, ಜು. 2: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಇಂದು ಭೇಟಿ ಮಾಡಿ, ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಕೆಲವು ರಸ್ತೆಗಳ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
ಈ ಸಂದರ್ಭ ಕರಾವಳಿ ಬೈಪಾಸ್-ಮಲ್ಪೆ ರಸ್ತೆ ಅಗಲೀಕರಣ, ಪರ್ಕಳದಿಂದ-ತೀರ್ಥಹಳ್ಳಿಯವರೆಗೆ ರಸ್ತೆ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿ, ಶೃಂಗೇರಿ-ಬಾಳೆಹೊನ್ನೂರು-ಅಲ್ದೂರು-ನಾಡಿಪುರ ರಸ್ತೆ ಅಭಿವೃದ್ಧಿ, ತೀರ್ಥಹಳ್ಳಿಯಿಂದ- ನಿಮ್ಮಾರದವರೆಗೆ ರಸ್ತೆ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು (ಮೂಡಿಗೆರೆ-ಕಡೂರು ರಸ್ತೆ) ನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಹಾಗೂ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಇನ್ನಿತರ ಸಮಸ್ಯೆಗಳ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದು, ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
Next Story