Breaking News- ವಿಟ್ಲದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ
# ತಡವಾಗಿ ಬೆಳಕಿಗೆ ಬಂದ ಕೃತ್ಯ #ಗರ್ಭವತಿಯಾಗಿರುವ ಸಂತ್ರಸ್ತೆ
ಬಂಟ್ವಾಳ, ಜು.9: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆಯ ಗ್ರಾಮ ಪಂಚಾಯತ್ ಸಿಬ್ಬಂದಿ ಸಹಿತ ಐವರು ಅತ್ಯಾಚಾರ ಎಸಗಿರುವ ಪ್ರತ್ಯೇಕ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತ ಬಾಲಕಿ ಇದೀಗ ಗರ್ಭವತಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಟ್ಲ ಸಮೀಪದ ನಿವಾಸಿಯಾಗಿರುವ 17 ವರ್ಷದ ಬಾಲಕಿ ಮೇಲೆ ಈ ಕೃತ್ಯ ನಡೆದಿದೆ.
ಎಸೆಸೆಲ್ಸಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದಳು. ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿದಂತೆ ಐವರು ಈಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಯಾರಲ್ಲೂ ಹೇಳದಂತೆ ಆರೋಪಿಗಳು ಬೆದರಿಕೆ ಹಾಕಿದ್ದರೆನ್ನಲಾಗಿದೆ.
ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲಿಸರು ತನಿಖೆ ಮುಂದುವರಿಸಿದ್ದಾರೆ.
Next Story