ಪಂಪ್ವೆಲ್: ಬೆಂಕಿಗಾಹುತಿಯಾದ ಮನೆ
ಮಂಗಳೂರು, ಜು.10: ಆಕಸ್ಮಿಕವಾಗಿ ಕಾಣಿಸಿಕೊಂಡು ಬೆಂಕಿಯಿಂದ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ಕಳೆದ ರಾತ್ರಿ ಪಂಪ್ವೆಲ್ ಬಳಿ ಸಂಭವಿಸಿದೆ.
ಇಲ್ಲಿನ ನವೀನ್ ತಾರೆತೋಟ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ರಾತ್ರಿ 12 ಗಂಟೆ ಸುಮಾರಿಗೆ ಈ ಬೆಂಕಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.
ಬೆಂಕಿಯಿಂದ ಮನೆ ಭಾಗಶಃ ಭಸ್ಮಗೊಂಡಿದ್ದು, ಸುಮಾರು 4 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Next Story