ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೇರಿಗಾರ್ ಆಯ್ಕೆ
ಉಡುಪಿ, ಜು.12: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ 2019-24ನೇ ಸಾಲಿನ ಅಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಸುಬ್ರಹ್ಮಣ್ಯ ಶೇರಿಗಾರ್ ಸತತ ಮೂರನೇ ಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯ ಪರಿಷತ್ನ ಸದಸ್ಯರಾಗಿ ಕಾವಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕಿರಣ್ ಹೆಗ್ಡೆ ಸತತ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಖಜಾಂಚಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಅರುಣ್ ಮಾರುತಿ ಲೋಕರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story