ಹೊರೈಝನ್ ಸ್ಕೂಲ್ನ ಶಿಕ್ಷಕ-ರಕ್ಷಕ ಸಭೆ
ವಿಟ್ಲ, ಜು.14: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಭೆಯು ಶಾಲೆಯ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಸೀದಿಯ ಅಧ್ಯಕ್ಷ ಇಬ್ರಾಹೀಂ ಮೇಗಿನಪೇಟೆ, ಶಾಲೆಯ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂ.ಎ., ಸಂಚಾಲಕ ನೋಟರಿ ಅಬೂಬಕರ್, ಮೇಲ್ವಿಚಾರಕ ವಿ.ಕೆ.ಎಂ.ಅಶ್ರಫ್, ಸದರ್ ಉಮರ್ ಸಅದಿ, ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ, ಅಬ್ದುಲ್ ರಹಿಮಾನ್ ದೀಪಕ್, ಇಕ್ಬಾಲ್ ಹಳೆಮನೆ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.
ಖತೀಬ್ ಮುಹಮ್ಮದ್ ಅಲಿ ಫೈಝಿ ದುಆಗೈದರು. ಮುಖ್ಯ ಶಿಕ್ಷಕಿ ವಿಲಾಸಿನಿ ಪ್ರಸ್ತಾವಗೈದರು. ಶಿಕ್ಷಕಿಯರಾದ ಚೈತ್ರಾ ಸ್ವಾಗತಿಸಿದರು. ಮಾಸಿತಾ ವಂದಿಸಿದರು. ಚೇತನಾ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಮತ್ತು ಮದ್ರಸ ಶಿಕ್ಷಕರು ಉಪಸ್ಥಿತರಿದ್ದರು.
Next Story