ಗೋಶಾಲೆಗಳಿಗೆ ಬೆಂಬಲದ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಜು.17: ಕನಿಷ್ಠ 50 ಸ್ವದೇಶಿ ಜಾನುವಾರುಗಳನ್ನು ಕಳೆದ 3 ವರ್ಷ ಗಳಿಂದ ಪೋಷಿಸುತ್ತಿರುವ ನೋಂದಾಯಿತ ಟ್ರಸ್ಟ್ನ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೋಶಾಲೆಗಳಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ 2019-20ನೇ ಸಾಲಿನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಗೋಶಾಲೆಯವರು ಜುಲೈ 22ರೊಳಗೆ ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ (ದೂರವಾಣಿ:0820-2534024) ಇವರನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story