ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ
ಉಡುಪಿ, ಜು.17: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಉಡುಪಿಯೂ ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆ ಯಾದ್ಯಂತ ಅಲ್ಲಲ್ಲಿ ಭಾರೀ ಮಳೆ ಸುರಿಯಲಿದ್ದು, ಮಳೆಯ ಪ್ರಮಾಣ 11 ಸೆ.ಮೀ.ನ್ನು ಮೀರಲಿದೆ ಎಂದು ಹವಾ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಈ ಮಳೆ ಜು.19ರವರೆಗೆ ಮುಂದುವರಿಯಲಿದೆ ಎಂದು ಅದು ಹೇಳಿದೆ
Next Story