ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿಗೆ ಉತ್ತಮ ಫಲಿತಾಂಶ
ಕುಂದಾಪುರ, ಜು.19: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ನಡೆಸಿದ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.
ಮೆಕಾನಿಕಲ್ ಇಂಜಿನಿಯರಿಂಗ್, ಇಲೆಕ್ಟ್ರಿಕಲ್ ಎಂಡ್ ಇಲೆಕ್ಟ್ರಾನಿಕ್ಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗಗಳು ಶೇ. 100 ಫಲಿತಾಂಶ ದಾಖಲಿಸಿವೆ. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಶೇ.97 ಮತ್ತು ಸಿವಿಲ್ ಇಂಜಿನಿಯರಿಂಗ್ನಲ್ಲಿ ಶೇ. 95 ಫಲಿತಾಂಶ ದಾಖಲಿಸಿದೆ. ಶೇ.80ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ್ ಡಾ. ಕಾಟಯ್ಯ ಜಿ.ಎಸ್ ತಿಳಿಸಿದ್ದಾರೆ.
Next Story