ಐಬಿಪಿಎಸ್ ಪರೀಕ್ಷೆಗೆ ಉಚಿತ ತರಬೇತಿ
ಉಡುಪಿ, ಜು.19: ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಐಬಿಪಿಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇದರ ಆಶ್ರಯದಲ್ಲಿ ಸ್ಟಡಿ ಸರ್ಕಲ್ ಯೋಜನೆ ಯಡಿಯಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಮಣಿಪಾಲದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3:30ರಿಂದ 5:30 ರವರೆಗೆ ಹಾಗೂ ರಜಾದಿನಗಳಲ್ಲಿ ನಡೆಸಲಾಗುವುದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲ್ಛಿಸುವ ಅ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೋಂದಾಯಿಸಲು ಸೂಚಿಸಲಾಗಿದೆ.
ತರಬೇತಿಯು ಉಚಿತವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0820 2574869, 9480259790ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದೊ್ಯೀಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story