ಅಲ್ಪಸಂಖ್ಯಾತರ ಪ್ರೋ- ಅರ್ಜಿ ಆಹ್ವಾನ
ಮಂಗಳೂರು, ಜು.20: ಪ್ರಸಕ್ತ 2019-20ನೇ ಸಾಲಿನ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ಬಿ.ಎಡ್, ಡಿ.ಎಡ್ ಕೋರ್ಸ್ಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜು ವಿದ್ಯಾರ್ಥಿಗಳು ಕಚೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನ ಆಝಾದ್ ಭವನ, ಓಲ್ಸ್ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824- 2433078ನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆ ತಿಳಿಸಿದೆ.
Next Story