ಭಾರೀ ಮಳೆ ಹಿನ್ನೆಲೆ: ಕಾಸರಗೋಡು ಜಿಲ್ಲೆಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ
ಕಾಸರಗೋಡು, ಜು.22: ಭಾರೀ ಮಳೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಇಂದು(ಜು.22ರಂದು) ಶಾಲೆಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಶಾಲಾ - ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ರಜೆ ಘೋಷಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ( ಮಂಗಳವಾರ ) ರೆಡ್ ಅಲರ್ಟ್ ಘೋಷಿಸಲಾಗಿದೆ.
Next Story