ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಕೋಟ : ಚಿತ್ರಪಾಡಿ ಗ್ರಾಮದ ಗಿರಿಜಾ ರೋಡ್ಲೈನ್ಸ್ ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.23ರಂದು ಮಧ್ಯಾಹ್ನ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸಾಲಿಗ್ರಾಮದ ಪ್ರಶಾಂತ ಪೂಜಾರಿ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ರಸ್ತೆಯ ಬದಿ ಯಲ್ಲಿ ನಿಂತಿದ್ದ ಪ್ರಶಾಂತ ಪೂಜಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story