ಮಂಗಳೂರು: 9 ಮಂದಿ ಅನುಮಾನಾಸ್ಪದ ವ್ಯಕ್ತಿಗಳು, ಕಾರು ಪೊಲೀಸ್ ವಶಕ್ಕೆ
ಮಂಗಳೂರು, ಆ.16: ನಗರದ ಲಾಡ್ಜ್ ವೊಂದರಲ್ಲಿದ್ದ ಅನುಮಾನಾಸ್ಪದ ವ್ಯಕ್ತಿಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಪಾಸಣೆ ವೇಳೆ ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ವೊಂದರಲ್ಲಿ ಅನುಮಾನಾಸ್ಪದ 9 ಮಂದಿಯನ್ನು ಹಾಗು ಕಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ಖಚಿತಪಡಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.
Next Story