ಪ್ರವಾಹ ಸಂತ್ರಸ್ತರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಕೋಟಿ ರೂ. ನೆರವು : ಡಾ. ವೀರೇಂದ್ರ ಹೆಗ್ಗಡೆ | Vartha Bharati- ವಾರ್ತಾ ಭಾರತಿ

---

ಪ್ರವಾಹ ಸಂತ್ರಸ್ತರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಕೋಟಿ ರೂ. ನೆರವು : ಡಾ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಪ್ರವಾಹದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಭಾರೀ ನಷ್ಟ ಸಂಭವಿಸಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ 25 ಕೋಟಿ ರೂ. ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡುವುದಾಗಿ ಹಾಗೂ ಬೆಳ್ತಂಗಡಿ ತಾಲೂಕಿನ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕಾರ್ಯಕ್ಕೆ 50 ಲಕ್ಷ ರೂ. ವನ್ನು ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡಿಗೂ ನೀಡಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರಹೆಗ್ಗಡೆ ಅವರು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಚಾರ ತಿಳಿಸಿದರು.

ಈ ಸಂಬಂಧ ಸೋಮವಾರ ಮುಖ್ಯಮಂತ್ರಿಯನ್ನು ಭೇಟಿಯಾಗಿ ಅವರಿಗೆ ಪರಿಹಾರ ಮೊತ್ತವನ್ನು ಹಸ್ತಾಂತರಿಸಲಾಗುವುದು ಎಂದು ತಿಳಿಸಿದ ಅವರು ತಾಲೂಕಿಗೆ ಬಿಡುಗಡೆ ಮಾಡಿದ 50 ಲಕ್ಷ ರೂ. ಅನುದಾನದ ಚೆಕ್ ಅನ್ನು  ಶಾಸಕ ಹರೀಶ್ ಪೂಂಜ ಅವರಿಗೆ ಹಸ್ತಾಂತರಿಸಿದರು.

ರಾಜ್ಯದಲ್ಲಿ ಯೋಜನೆಯವರು ನಡೆಸಿರುವ ಸಮೀಕ್ಷೆಯ ಪ್ರಕಾರ ಫಲಾನುಭಾವಿಗಳ ಸುಮಾರು 20,827 ಮನೆಗಳು ಹಾನಿಗೊಳಗಾಗಿವೆ. 28 ಸಾವಿರಕ್ಕೂ ಹೆಚ್ಚು ಕುಟುಂಬಗಳ ಕೃಷಿ ಭೂಮಿಗೆ ಹಾನಿಯಾಗಿದೆ. ಗೃಹೋಪಯೋಗಿ ವಸ್ತುಗಳು ನಾಶವಾಗಿದೆ. ಈ ಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಸಂಸ್ಥೆಗಳು ಜನರ ನೆರವಿಗೆ ನಿಂತಿವೆ ಎಂದು ಅವರು ತಿಳಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯಿಂದ 19,000 ಬೆಡ್ ಶೀಟ್‍ಗಳನ್ನು ಹಂಚಲಾಗಿದೆ. ನೆರೆ ಇಳಿದ ನಂತರ ಮನೆಗೆ ಮರುಳುವ ಸುಮಾರು ಐದು ಸಾವಿರ ಕುಟುಂಬಗಳಿಗೆ ತುರ್ತು ನಿತ್ಯೋಪಯೋಗಿ ಸಾಧನಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಎಸ್.ಡಿ ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ನೆರಯಲ್ಲಿ ಸಂತ್ರಸ್ತರಾಗಿರುವ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ರಾಜ್ಯದಲ್ಲಿ ಹಾಗೂ ಕೇರಳದಲ್ಲಿ ಕಳೆದ ಎರಡು ವರ್ಷಗಳಿಂದ ಪ್ರವಾಹ ಹಾಗೂ ಭೂ ಕುಸಿತದಿಂದ ಅನಾಹುತಗಳು ಸಂಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ತುರ್ತು ರಕ್ಷಣೆ ಹಾಗೂ ಸೇವೆಗೆಂದು ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪ್ರತಿ ತಾಲೂಕಿನಲ್ಲಿ ನೂರು ಸದಸ್ಯರುಗಳಿರುವ ಸುಮಾರು 2 ಲಕ್ಷ ಜನರಿರುವ ವಿಪತ್ತು ನಿರ್ವಹಣಾ ವೇದಿಕೆಯನ್ನು ರಚಿಸಲಾಗುವುದು. ಇವರಿಗೆ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯಿಂದ ತರಬೇತಿ ನೀಡುವುದಲ್ಲದೆ ಅಗತ್ಯ ಉಪಕರಣಗಳನ್ನು ದಾಸ್ತಾನು ಮಾಡಲಾಗುವುದು ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಯಾವುದೇ ತಾಲೂಕಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದರೆ ಕೂಡಲೇ ಸ್ಪಂದಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು.

'ಕೇಂದ್ರ ಸರಕಾರ ಹೆಚ್ಚಿನ ನೆರವು ನೀಡಬೇಕು'

ರಾಜ್ಯ ಹಿಂದೆಂದೂ ಕೇಳಿರದ ರೀತಿಯ ಪ್ರವಾಹ ಸಂಭವಿಸಿದ್ದು ಪರಿಹಾರ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಕರೆ ನೀಡಿದ ಅವರು ಇಂತಹ ಸಂದರ್ಭ ಕೇಂದ್ರ ಸರಕಾರ ಹೆಚ್ಚಿನ ನೆರವನ್ನು ಒದಗಿಸಿ ರಾಜ್ಯದ ನೆರವಿಗೆ ಬರಬೇಕಾಗಿದೆ ಎಂದು ವೀರೇಂದ್ರ ಹೆಗ್ಗಡೆ ಅವರು ಆಗ್ರಹಿಸಿದರು.

ಸಂತ್ರಸ್ತರು ಎಚ್ಚರದಿಂದಿದ್ದು ತಮಗೆ ದೊರಕುವ ಪರಿಹಾರ ಸಾಮಗ್ರಿಗಳನ್ನು ಹಾಗೂ ಹಣವನ್ನು ಸದುಪಯೋಗ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅದರ ದುರುಪಯೋಗವಾಗದಂತೆ ಎಚ್ಚರ ವಹಿಸಬೇಕು ಎಂದು ಅವರು ವಿನಂತಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಶಾಸಕ ಹರೀಶ್ ಪೂಂಜ, ಹೇಮಾವತಿ ವಿ ಹೆಗ್ಗಡೆ, ಡಾ. ಎಲ್ ಎಚ್ ಮಂಜುನಾಧ್ ಉಪಸ್ಥಿತರಿದ್ದರು. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top