ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಆ.17: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 6ರಿಂದ 18 ವಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ’ ಹಾಗೂ ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆಯ ಸಂದರ್ದಲ್ಲಿ ಪ್ರದಾನ ಮಾಡಲಾಗುತ್ತದೆ.
ಇದಕ್ಕಾಗಿ 2018ರ ಆ.31 ಮತ್ತು 2019ರ ಜು.31ರೊಳಗೆ ನಡೆದಿರಬೇಕು. 2001ರ ಆ.1ರ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುವರು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತು್ತ ಪ್ರಶಸ್ತಿ ಪತ್ರ ನೀಡಲಾಗುತ್ತದೆ.
2019ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಗೆ ಆ.31ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲೇ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ: 0820-2574978ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.