ಶಂಕರನಾರಾಯಣ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ
ಉಡುಪಿ, ಆ.28: ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ರಜೆಯಲ್ಲಿ ಊರಿಗೆ ತೆರಳಿದ್ದ ಶಂಕರನಾರಾಯಣ ಪೊಲೀಸ್ ಠಾಣೆ ಸಿಬ್ಬಂದಿ ಯೊಬ್ಬರ ಮೃತದೇಹ ಇಂದು ಸಂಜೆ ತರಿಕೆರೆ ತಾಲೂಕಿನ ಬೆಟ್ಟದ ಕೆರೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಯರದಂಕಲು ಗ್ರಾಮದ ಲಿಂಗದಹಳ್ಳಿಯ ಮಲ್ಲೇಶಪ್ಪ(27) ಎಂದು ಗುರುತಿಸಲಾಗಿದೆ. 2015ರಲ್ಲಿ ಪೊಲೀಸ್ ಕರ್ತವ್ಯಕ್ಕೆ ಸೇರ್ಪಡೆಗೊಂಡ ಇವರು ಅಲ್ಲಿಂದ ಈವರೆಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಆ.16ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ರಜೆ ಪಡೆದು ಇವರು ಊರಿಗೆ ತೆರಳಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಅಥವಾ ಬೇರೆ ಕಾರಣವೇ ಎಂಬುದು ತಿಳಿದುಬಂದಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story