ಕಾರ್ಕಳ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
ಉಡುಪಿ, ಆ.21: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ನಗರ ಪೊಲೀಸ್ ಠಾಣಾ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ 28 ಪ್ರಕರಣಗಳನ್ನು ದಾಖಲಿಸಿ 2800 ರೂ. ದಂಡ ವಸೂಲಿ ಮಾಡಲಾಗಿದೆ.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಕಾರ್ಕಳ ಹಿರಿಯ ಆರೋಗ್ಯ ಸಹಾಯಕ ಶಿವರಾಮ ಭಟ್, ಜಿಲ್ಲಾ ಎನ್ಸಿಡಿ ಘಟಕದ ಜಿಲ್ಲಾ ಸಲಹೆಗಾರ ಡಾ.ಅಪನ್, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್ಟಿಸಿಪಿ ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರ್, ಕಾರ್ಕಳ ಪೊಲೀಸ್ ಠಾಣೆಯ ಆರಕ್ಷಕ ರವೀಂದ್ರ ಮತ್ತಿರರು ಉಪಸ್ಥಿತರಿದ್ದರು.
Next Story