ಮಂಗಳೂರು: ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ಬಸ್ ಗಾಗಿ ಮನವಿ
ಮಂಗಳೂರಿನ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ವಾಹನ (ಬಸ್) ನೀಡುವಂತೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಮನವಿ ಸಲ್ಲಿಸಲಾಯಿತು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನಾಥ್ ಶೆಟ್ಟಿ ಬಾಳ , ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .
Next Story