ಕರಾವಳಿಯಲ್ಲಿ ‘ಯೆಲ್ಲೋ ಅಲರ್ಟ್’ : ದ.ಕ. ಜಿಲ್ಲೆಯಲ್ಲಿ ಮತ್ತೆ ಮುಂಗಾರು ಚುರುಕು
ಮಂಗಳೂರು, ಆ.24: ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಬಿರುಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ಐದು ದಿನಗಳವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಆ. 29ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಕಾರ್ಮೋಡ ಕವಿಸಿದ್ದು, ಮಳೆಯ ಆರ್ಭಟ ಮುಂದುವರಿದಿದೆ. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
Next Story