ಶ್ಯಾಟಲ್ ಬ್ಯಾಟ್ ಮಿಂಟನ್ ಸ್ಪರ್ಧೆ: ಮೆಲ್ಕಾರ್ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ ಮಂಗಳೂರು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಮೊಂಟೆಪದವು ಆಶ್ರಯದಲ್ಲಿ ವಿಠಲ ಪದವಿಪೂರ್ವಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಶ್ಯಾಟಲ್ ಬ್ಯಾಟ್ ಮಿಂಟನ್ ಸ್ಪರ್ಧೆಯಲ್ಲಿ ಮೆಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ.
ಪ್ರಥಮ ವಾಣಿಜ್ಯ ವಿಭಾಗದ ಸಿ.ಪಿ. ಸಮೀನ ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರೆ, ಪ್ರಥಮ ವಾಣಿಜ್ಯ ವಿಭಾಗದ ನಫೀಸತ್ ಮಿಶ್ರಿಯಾ ಹಾಗೂ ಸಮೀನ, ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
Next Story