ಮಂಗಳೂರು: ಬಾಂಗ್ಲಾ ಮೂಲದ ವ್ಯಕ್ತಿ ಬಂಧನ
ಮಂಗಳೂರು: ಪಾಸ್'ಪೋರ್ಟ್ ಸೇರಿದಂತೆ ಯಾವುದೇ ದಾಖಲೆ ಪತ್ರವಿಲ್ಲದ ಬಾಂಗ್ಲಾ ನಿವಾಸಿ ದುಲಾಯಿ ಬೈರಾಗಿ (55) ಮೂಡುಬಿದಿರೆಯಲ್ಲಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಬೀಟ್ ಪೊಲೀಸರ ಮೂಲಕ ಈತನ ಬಗ್ಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಆರೋಪಿ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದು, ಯಾವುದೇ ದಾಖಲೆಗಳು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Next Story