ಬ್ಯಾರಿ ಸಮುದಾಯದಲ್ಲಿ ಇನ್ನಷ್ಟು ಶೈಕ್ಷಣಿಕ ಕ್ರಾಂತಿಯಾಗಬೇಕು: ಯು.ಟಿ.ಖಾದರ್ | Vartha Bharati- ವಾರ್ತಾ ಭಾರತಿ

---

ದುಬೈ ಬಿಸಿಎಫ್ ನಿಂದ ವಿದ್ಯಾರ್ಥಿ ವೇತನ, ಹೊಲಿಗೆ ಯಂತ್ರ ವಿತರಣೆ

ಬ್ಯಾರಿ ಸಮುದಾಯದಲ್ಲಿ ಇನ್ನಷ್ಟು ಶೈಕ್ಷಣಿಕ ಕ್ರಾಂತಿಯಾಗಬೇಕು: ಯು.ಟಿ.ಖಾದರ್

ಮಂಗಳೂರು, ಆ. 25: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತೀರಾ ಹಿಂದುಳಿದಿದ್ದ ಬ್ಯಾರಿ ಸಮುದಾಯವು ಇಂದು ಸಾಕಷ್ಟು ಮುಂದುವರಿದಿದೆ. ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿ ಬ್ಯಾರಿ ಯುವ ಸಮೂಹದ ಕೊಡುಗೆಗಳನ್ನು ಕಾಣಬಹುದಾಗಿದೆ. ಶಿಕ್ಷಣ ಮತ್ತು ಜ್ಞಾನದಾಹಕ್ಕೆ ಮಿತಿ ಎಂಬುದಿಲ್ಲ. ಹಾಗಾಗಿ ಬ್ಯಾರಿ ಸಮುದಾಯದಲ್ಲಿ ಇನ್ನಷ್ಟು ಶೈಕ್ಷಣಿಕ ಕ್ರಾಂತಿಯಾಗಬೇಕಾಗಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಹೇಳಿದರು.

ದುಬೈ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ಮತ್ತು ಬ್ಯಾರೀಸ್ ಕಲ್ಚರಲ್ ಫೋರಂ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮತ್ತು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಹಕಾರದಲ್ಲಿ ನಗರದ ಪುರಭವನದಲ್ಲಿ ರವಿವಾರ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸ್ವ ಉದ್ಯೋಗಕ್ಕಾಗಿ 60 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಸಾಧನೆಗಳ ಮೂಲಕ ಉನ್ನತ ಸ್ಥಾನಕ್ಕೇರುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಬ್ಯಾರಿ ಸಮುದಾಯ ಮುನ್ನುಗ್ಗಬೇಕಿದೆ. ಕೇವಲ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದುಕೊಂಡರೆ ಸಾಲದು. ಬಲಿಷ್ಠ ಸಮಾಜ, ದೇಶ ಕಟ್ಟಲು ಶಿಕ್ಷಣ ಅಗತ್ಯವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ತಾವು ಕಲಿತ ವಿದ್ಯೆ, ವಿನಯಶೀಲತೆಯನ್ನು ಸಮಾಜಕ್ಕೆ ಮಾದರಿಯಾಗುವಂತೆ ಬಳಸಿಕೊಳ್ಳಬೇಕು. ಜೀವನ ಶೈಲಿ, ವ್ಯಕ್ತಿತ್ವ ವಿಕಸನದ ಜೊತೆಗೆ ಯಶಸ್ಸು ಸಾಧಿಸಲು ಮುಂದಾಗಬೇಕು. ಕೇವಲ ಕನಸು ಕಂಡರೆ ಸಾಲದು. ಅದನ್ನು ನನಸುಗೊಳಿಸಲು ಶ್ರಮಪಡಬೇಕಿದೆ ಎಂದು ಯು.ಟಿ.ಖಾದರ್ ಸಲಹೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಸಿಎಫ್‌ನ ಅಧ್ಯಕ್ಷ ಡಾ. ಬಿ.ಕೆ.ಯೂಸುಫ್, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 17 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಬಾರಿ ಪಿಯುಸಿಯಿಂದ ಸ್ನಾತಕೋತ್ತರ ಪದವಿಯವರೆಗಿನ 480 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಗುರಿ ಹಾಕಿದ್ದೇವೆ ಎಂದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜ, ಡಿಸಿಪಿ ಅರುಣಾಂಶು ಗಿರಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಮೊಯ್ದಿನ್ ಬಾವಾ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ, ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್‌ನ ಆಡಳಿತ ನಿರ್ದೇಶಕ ಅಬ್ದುಲ್ ರವೂಫ್, ಕೆಸಿಸಿಐ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್, ಉದ್ಯಮಿಗಳಾದ ಹಾಜಿ ಕೆ.ಎಸ್. ಸೈಯದ್ ಕರ್ನಿರೆ, ಮುಹಮ್ಮದ್ ಹಾರಿಸ್ ಮುಕ್ಕ, ಎಸ್.ಎ. ಶರೀಫ್ (ಪಿ.ಸಿ.ಬಾವಾ), ಎಸ್.ಎಂ. ಮುಸ್ತಫಾ ಭಾರತ್, ಹಿದಾಯ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಖಾಸಿಂ ಅಹ್ಮದ್, ಕರ್ನಾಟಕ ಮುಸ್ಲಿಂ ಜಮಾಅತ್‌ನ ದ.ಕ.ಜಿಲ್ಲಾ ಉಪಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಮಾಜಿ ಸದಸ್ಯರಾದ ಖಾಲಿದ್ ಉಜಿರೆ, ಬಶೀರ್ ಬೈಕಂಪಾಡಿ, ಅಝೀಝ್ ಬೈಕಂಪಾಡಿ, ಹುಸೈನ್ ಕಾಟಿಪಳ್ಳ, ಪ್ರಾಂಶುಪಾಲೆ ಝಾಹಿದಾ ಜಲೀಲ್ ಮತ್ತಿತರರು ಭಾಗವಹಿಸಿದ್ದರು.

ಬಿಸಿಎಫ್‌ನ ಕಾರ್ಯಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಬಿಸಿಎಫ್ ಸ್ಕಾಲರ್‌ಶಿಪ್ ಕಮಿಟಿಯ ಅಧ್ಯಕ್ಷ ಎಂ.ಇ. ಮೂಳೂರು ವಿವರಿಸಿದರು.

ಬಿಸಿಎಫ್ ಪೋಷಕ ಬಿ.ಎಂ. ಮುಮ್ತಾಝ್ ಅಲಿ ಸ್ವಾಗತಿಸಿದರು. ಪಂಪ್‌ವೆಲ್ ತಖ್ವಾ ಇಸ್ಲಾಮಿಕ್ ಸ್ಕೂಲ್‌ನ ಪ್ರೊಫೆಸರ್ ಹಾಫಿಳ್ ಸಲ್ಮಾನ್ ಕಿರಾಅತ್ ಪಠಿಸಿದರು. ಬಿಸಿಎಫ್ ಉಪಾಧ್ಯಕ್ಷ ಅಮೀರುದ್ದೀನ್ ಎಸ್.ಐ. ವಂದಿಸಿದರು. ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹಮ್ಮದ್ ಮತ್ತು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಲಹೆಗಾರ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

ಯುಎಇ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕ ಪ್ರೊ. ಡಾ.ಕಾಪು ಮುಹಮ್ಮದ್ ಕೆರಿಯರ್ ಗೈಡೆನ್ಸ್ ಸಿಂಪೋಸಿಯಂ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭ ಖಾಝಿ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ದುಆಗೈದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವಾ, ಅಬುಧಾಬಿ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಉದ್ಯಮಿ ಅಶ್ರಫ್ ಕರ್ನಿರೆ, ಅಬ್ದುಲ್ಲಾ ಮದುಮೂಲೆ ಹಾಗೂ ವಿವಿಧ ಕ್ಷೇತ್ರದ ಸಾಧಕರಾದ ಡಾ. ಮರಿಯಂ ಅಂಜುಮ್ ಇಫ್ತಿಕಾರ್, ಡಾ. ನಜೀಬ್ ಬೆಹ್‌ಝಾದ್ ಮುಹಮ್ಮದ್, ಡಾ. ಸಲ್ಮಾ ಸುಹಾನಾ, ಸ್ನೇಹ ದೀಪಾದ ತಬಸ್ಸುಂ ಅವರನ್ನು ಸನ್ಮಾನಿಸಲಾಯಿತು.

ರೆಂಜಾಳದ ಬದ್ರಿಯಾ ಮದ್ರಸದ 5ನೆ ತರಗತಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ, ಪರಪ್ಪು ಹಿದಾಯತುಸ್ಸಿಬಿಯಾನ್ ಮದ್ರಸದ 7ನೆ ತರಗತಿ ವಿದ್ಯಾರ್ಥಿನಿ ಫಾತಿಮತ್ ಶಾಝಾ, ಮಾಡನ್ನೂರಿನ ನೂರುಲ್ ಇಸ್ಲಾಮ್ ಮದ್ರಸದ 10ನೆ ತರಗತಿಯ ವಿದ್ಯಾರ್ಥಿನಿ ರಝ್ನಾ ಎಂಎ, ಕಲ್ಕಡ್ಕ ಕೆ.ಸಿ.ರೋಡ್‌ನ ನೂರುಲ್ ಉಲೂಂ ಮದ್ರಸದ 12ನೆ ತರಗತಿಯ ವಿದ್ಯಾರ್ಥಿನಿ ಅಸ್‌ಮೀನಾ ಅವರಿಗೆ ಬಿಸಿಎಫ್ ಮದ್ರಸ ಎಕ್ಸಲೆನ್ಸ್ ಅವಾರ್ಡ್ ನೀಡಲಾಯಿತು.

ಉಪ್ಪಿನಂಗಡಿಯ ಇಂದ್ರಪ್ರಸ್ತ ವಿದ್ಯಾಲಯದ ಎಸೆಸ್ಸೆಲ್ಸಿ ವಿದ್ಯಾರ್ಥಿನಿ ತಾಜ್ ಅಮೀಶಾ, ಹೆಬ್ರಿಯ ಎಸ್‌ಆರ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ರಈಸಾ, ಬಬ್ಬುಕಟ್ಟೆ ಹಿರಾ ಕಾಲೇಜಿನ ವಾಣಿಜ್ಯ ವಿಭಾಗದ ಉಝ್ರೆ ಖೈರುನ್ನಿಸಾ ಮತ್ತು ಕಲಾ ವಿಭಾಗದ ಖದೀಜಾ ಅನ್‌ಸಾ ಅವರಿಗೆ ಬಿಸಿಎಫ್ ಅಕಾಡಮಿಕ್ ಎಕ್ಸಲೆನ್ಸ್ ಅವಾರ್ಡ್ ನೀಡಲಾಯಿತು.

ಉಪ್ಪಿನಂಗಡಿಯ ಇಂದ್ರಪ್ರಸ್ಥ ಪಿಯು ಕಾಲೇಜಿನ ಅಮಾನ್ ಕೆ.ಎ. ಮತ್ತು ಎ.ಯು. ನಚಿಕೇತ್ ಕುಮಾರ್‌ಗೆ ಬಿಸಿಎಫ್ ಯುವ ವಿಜ್ಞಾನಿ ಅವಾರ್ಡ್ ನೀಡಿ ಗೌರವಿಸಲಾಯಿತು.

ಮಂಗಳೂರು ಬಂದರ್‌ನ ಕ್ರೆಸೆಂಟ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top