ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಉಡುಪಿ, ಆ. 25: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಂತೆಕಟ್ಟೆ ರೋಬೋ ಸಾಫ್ಟ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.24ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಬನ್ನಾಡಿಯ ಉದಯ ಆಚಾರ್(42) ಎಂದು ಗುರುತಿಸ ಲಾಗಿದೆ. ಇವರು ಸಂತೆಕಟ್ಟೆ ಯಿಂದ ಕರಾವಳಿ ಕಡೆಗೆ ಹೋಗುತ್ತಿದ್ದಾಗ ಹಿಂದಿ ನಿಂದ ಬಂದ ಸ್ಯಾಂಟ್ರೋ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಉದಯ ಆಚಾರ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮಣಿಪಾಲ ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ಹವ್ಯಾಸಿ ಯಕ್ಷಗಾನ ಕಲಾವಿದರಾದ ಇವರು ಮೆಡಿಕಲ್ ರೆಪ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story